ರೈತರೇ ಗಮನಿಸಿ : ‘ಫಸಲ್ ಭೀಮಾ’ ಬೆಳೆ ವಿಮೆ ನೋಂದಣಿ ಕುರಿತು ಇಲ್ಲಿದೆ ಮುಖ್ಯ ಮಾಹಿತಿ
ಜಿಲ್ಲೆಯಲ್ಲಿ ಪ್ರಸ್ತಕ ಸಾಲಿಗೆ ಮುಂಗಾರು ಹಂಗಾಮು ಅವಧಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಬೆಳೆ ವಿಮೆ ಯೋಜನೆ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಹ ರೈತರು ತಮ್ಮ ಬೆಳೆಗಳ ವಿಮೆಗೆ ನೋಂದಾಯಿಸಿಕೊಳ್ಳಬಹುದು ಎಂದು ಜಿಪಂ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಸಂತೋಷ್ ಸಪ್ಪಂಡಿ ಅವರು ತಿಳಿಸಿದ್ದಾರೆ. ಪ್ರಕೃತಿ ವಿಕೋಪಗಳು, ಹವಾಮಾನ ವೈಪರೀತ್ಯಗಳಾದ ಅತಿವೃಷ್ಟಿ, ಅನಾವೃಷ್ಟಿ, ಬಿರುಗಾಳಿ, ಆಲಿಕಲ್ಲು ಮಳೆ, ಪ್ರವಾಹ ಮತ್ತು ಸಿಡಿಲಿನಿಂದ ಉಂಟಾಗುವ ಬೆಂಕಿ ಅವಘÀಡ ಇತ್ಯಾದಿ ಕಾರಣಗಳಿಂದ ಸಂಭವಿಸಬಹುದಾದ ಬೆಳೆಹಾನಿಯ ನಷ್ಟದ ಪರಿಹಾರವನ್ನು ಬೆಳೆ…