ಬರ ಪರಿಹಾರ ಹಣ ಅಪ್ಡೇಟ್ ನ್ಯೂಸ್!

ನಮಸ್ಕಾರ ಆತ್ಮೀಯ ರೈತ ಬಾಂಧವರೇ ಇಂದಿನ ಲೇಖನದಲ್ಲಿ ನಾವು ಈಗಾಗಲೇ ಬಹಳಷ್ಟು ಜನ ರೈತರು ಬೆಳೆ ವಿಮೆ ಹಣವನ್ನು ಪಾವತಿ ಮಾಡಿದ್ದಾರೆ. ಹಾಗಿದ್ದರೆ ಬೆಳೆ ವಿಮೆಯ ಹಣ ಈಗಾಗಲೇ 22 ಲಕ್ಷ ರೈತರಿಗೆ ಬೆಳೆವಿಮೆ ಹಣ ಬಿಡುಗಡೆಯಾಗಿದೆ ಯಾವ ರೈತರಿಗೆ ಎಷ್ಟು ಬೆಳೆ ವಿಮೆ ಹಾಗೂ ಎಷ್ಟು ಬರ ಪರಿಹಾರ ಹಣ ಜಮೆಯಾಗಿರುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡುತ್ತಿದ್ದೇವೆ.
ಬರ ಘೋಷಿತ 223 ತಾಲೂಕುಗಳ ರೈತರಿಗೆ ಮೊದಲ ಕಂತಿನಲ್ಲಿ ಗರಿಷ್ಠ 2 ಸಾವಿರ ರೂ.ವರೆಗೆ ಬೆಳೆ ನಷ್ಟ ಪರಿಹಾರ ಕೊಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಯಾವ ರೈತರಿಗೆ ಮೊದಲ ಬರ ಪರಿಹಾರ ಮುಂದಿನ ವಾರದೊಳಗೆ ವಿತರಣೆಗೆ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಬೆಳೆ ನಾಶದಿಂದ ಸಂಕಷ್ಟಕ್ಕೆ ಒಳಗಾಗಿರುವ ರೈತರಿಗೆ ಈಗಾಗಲೇ ಸರ್ಕಾರ ಘೋಷಿಸಿರುವ ರೂ.2,000 ವರೆಗಿನ ಮೊದಲ ಹಂತದ ಪರಿಹಾರವನ್ನು ಈಗಾಗಲೇ ವಿತರಿಸಿದೆ. ಅದೇ ರೀತಿ ಯಾವ ಯಾವ ರೈತರ ಅಕೌಂಟ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಇರದೆ ಇರುವವರಿಗೆ ಸೂಚನೆ ನೀಡಿ ಬರ ಪರಿಹಾರ ವಿತರಣೆ ಮಾಡಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

➡️
• ಯಾವ ತಾಲೂಕಿಗೆ ಎಷ್ಟು ಬರ ಪರಿಹಾರ ಬರುತ್ತದೆ??
ಮುಂದಿನ ನಾಲೈದು ದಿನದಲ್ಲಿ ಅರ್ಹ ರೈತರಿಗೆ ಹಣ ವರ್ಗಾವಣೆ ಪ್ರಕ್ರಿಯೆ ಆರಂಭ!
223 ತಾಲೂಕು ಗಳಲ್ಲಿನ ಅರ್ಹ ರೈತರ ಬಗ್ಗೆ ಮಾಹಿತಿ ಪಡೆದು ಪರಿಹಾರ ವಿತರಣೆ ಶುರು
• ರಾಜ್ಯದಲ್ಲಿ ಭೀಕರ ಬರವಿದ್ದರೂ, ಕೇಂದ್ರದಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ. ನಮ್ಮ ರೈತರು ಹಾಗೂ ಜನರನ್ನು ಉಳಿಸುವ ಕೆಲಸವನ್ನು ಸರಕಾರ ಮಾಡಬೇಕಿದೆ. ಆದ್ದರಿಂದ ಕೇಂದ್ರದಿಂದ ಹಣ ಬರುವ ತನಕ ಕಾಯದೆ, ರಾಜ್ಯ ಸರಕಾರ ಮೊದಲ ಕಂತು ಬಿಡುಗಡೆ ಮಾಡಿದೆ.

Madyantara bele parihara – ಹೊಸಪೇಟೆ (ವಿಜಯನಗರ): ಬರಗಾಲದಿಂದ ತತ್ತರಿಸಿರುವ ವಿಜಯನಗರ ಜಿಲ್ಲೆಯ ರೈತರಿಗೆ ಕೊನೆಗೂ ಒಂದು ಸಂತಸದ ಸುದ್ದಿ ಲಭಿಸಿದ್ದು, ಬೆಳೆ ವಿಮೆ ಮಾಡಿಸಿದ 26,254 ಕೃಷಿಕರಿಗೆ ಮುಂಗಾರು ಹಂಗಾಮಿನ ಮಧ್ಯಂತರ ಬೆಳೆ ಪರಿಹಾರವಾಗಿ 719.27 ಕೋಟಿ ವಿಮಾ ಪರಿಹಾರ ಹಣ ಸಂದಾಯವಾಗಿದೆ.

ಮುಂಗಾರು ಹಂಗಾಮಿನ ಬೆಳೆ ನಷ್ಟದ ಸಮೀಕ್ಷೆಯನ್ನು ಕಳೆದ ತಿಂಗಳು ಕೃಷಿ, ತೋಟಗಾರಿಕೆ, ಕಂದಾಯ ಇಲಾಖೆಗಳು ಹಾಗೂ ವಿಮಾ ಕಂಪನಿಗಳು ಜಂಟಿಯಾಗಿ ನಡೆಸಿದ್ದವು. ಅದರ ವರದಿಯನ್ನು ಆಧರಿಸಿ ಇದೀಗ ಮಧ್ಯಂತರ ವಿಮಾ ಪರಿಹಾರ ದೊರೆತಿದೆ. ರೈತರು ಇಲ್ಲಿ ನೀಡಲಾದ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮಗೆ ಬರ ಪರಿಹಾರದ ಹಣ ಬರದೆ ಇರುವುದಕ್ಕೆ ಕಾರಣ ಏನು?ಬರ ಪರಿಹಾರ ಬರಬೇಕಾದರೆ ಏನು ಮಾಡಬೇಕು ಏನು ದಾಖಲೆ ಬೇಕು ಎಂದು ಸಂಪೂರ್ಣ ಮಾಹಿತಿ ಇದೆ. 👉https://parihara.karnataka.gov.in/service92/

ಬರ ಘೋಷಣೆಯು ಬರ ಪರಿಸ್ಥಿತಿಯನ್ನು ಪ್ರತಿನಿಧಿಸುವ ಪರಿಸ್ಥಿತಿಗಳಿಗೆ ಸರ್ಕಾರದ ಪ್ರತಿಕ್ರಿಯೆಯ ಪ್ರಾರಂಭವನ್ನು ಸೂಚಿಸುತ್ತದೆ. ಆ ಅವಧಿಯಲ್ಲಿ ಚಾಲ್ತಿಯಲ್ಲಿರುವ ಭಾರತ ಸರ್ಕಾರದ ಬರ ಕೈಪಿಡಿಯು ಸೂಚಿಸಿದ ವಸ್ತುನಿಷ್ಠ ನಿಯತಾಂಕಗಳಿಂದ ಮಾರ್ಗದರ್ಶಿಸಲ್ಪಟ್ಟ ಒಂದು ಘಟಕವಾಗಿ ತಾಲೂಕನ್ನು ಬಳಸಿಕೊಂಡು ಬರಗಾಲವನ್ನು ಘೋಷಿಸಲಾಗಿದೆ.

ರಾಜ್ಯ ಸರ್ಕಾರ, ಬರ ಪರಿಹಾರವಾಗಿ 16 ಲಕ್ಷ ಸಣ್ಣ ಮತ್ತು ಅತಿ ಸಣ್ಣ ರೈತ ಕುಟುಂಬಗಳಿಗೆ ತಲಾ 3,000 ರೂಪಾಯಿ ನೀಡಲು ನಿರ್ಧರಿಸಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೆಗೌಡ ಅವರು ಗುರುವಾರ ಹೇಳಿದ್ದಾರೆ. ರಾಜ್ಯದಲ್ಲಿ ಮಳೆಯ ಆರ್ಭಟ ಹೆಚ್ಚುತ್ತಿದ್ದು, ಸಿಡಿಲು ಬಡಿದು ಪ್ರಾಣಹಾನಿಯಾಗದಂತೆ ನೋಡಿಕೊಳ್ಳಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.
ಒಣ ಬೇಸಾಯದಲ್ಲಿ ತೊಡಗಿರುವ ಸಣ್ಣ ಮತ್ತು ಅತಿ ಸಣ್ಣ ರೈತರ ಸುಮಾರು 16 ಲಕ್ಷ ಕುಟುಂಬಗಳಿವೆ. ಅವರು ಬರದಿಂದ ಜೀವನ ನಿರ್ವಹಣೆ ಕಷ್ಟವಾಗುತ್ತಿದೆ. ಈ ಕುಟುಂಬಗಳಿಗೆ ತಲಾ 3 ಸಾವಿರ ರೂ. ಪರಿಹಾರ ನೀಡಲು ನಿರ್ಧರಿಸಲಾಗಿದ್ದು, ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ಎಂದು ಕೃಷ್ಣ ಬೈರೆಗೌಡ ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *